Thursday, August 11, 2022

Latest Posts

ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಗೆ 250 ರೂ.: ಕೇಂದ್ರ ಸರಕಾರದಿಂದ ದರ ನಿಗದಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ದೇಶದಲ್ಲಿ ಈಗಾಗಲೇ ಎರಡು ಲಸಿಕೆಗಳು ಅಭಿವೃದ್ಧಿಗೊಂಡಿದ್ದು, ಕೇಂದ್ರ ಸರ್ಕಾರ ಒಂದು ಡೋಸ್ ಕೊರೋನಾ ವ್ಯಾಕ್ಸಿನ್ ಗೆ 250 ರೂಪಾಯಿ ದರ ನಿಗದಿಪಡಿಸಿದೆ.
ಕೊರೋನಾ ಲಸಿಕೆಗಳು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದ್ದು, ಅದಕ್ಕಾಗಿ ಬೆಲೆ ನಿಗದಿ ಮಾಡಲಾಗಿದೆ. ಸರ್ಕಾರಿ ಅಧಿಕಾರಿಗಳು ತಿಳಿಸಿರುವ ಪ್ರಕಾರ ಪ್ರತಿ ಡೋಸ್ ಬೆಲೆ 250 ರೂ. ಆಗಿದ್ದು, ಜತೆಗೆ 100 ರೂ ಸೇವಾ ಶುಲ್ಕ ನೀಡಬೇಕಾಗಿದೆ. ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು.
ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಖಾಸಗಿ ಸೌಲಭ್ಯಗಳಲ್ಲಿ ವ್ಯಾಕ್ಸಿನೇಷನ್​ ಅನ್ನು ಹಣಕಾಸಿನ ಸೀಲಿಂಗ್​ಗೆ ಒಳಪಡಿಸಲಾಗುತ್ತದೆ. ಆದರೆ ಸರ್ಕಾರಿ ಸಿಬ್ಬಂದಿಗಳಿಗೆ ವ್ಯಾಕ್ಸಿನೇಷನ್​ ಸಂಪೂರ್ಣವಾಗಿ ಉಚಿತವಾಗಲಿದ್ದು, ಇದರ ವೆಚ್ಚವನ್ನ ಕೇಂದ್ರ ಸರ್ಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ.
ಮಾರ್ಚ್​ 1ರಿಂದ ದೇಶಾದ್ಯಂತ ಮೂರನೇ ಹಂತದ ಕೋವಿಡ್ ವ್ಯಾಕ್ಸಿನ್ ನೀಡಲು ಶುರು ಮಾಡಲಾಗುವುದು ಎಂದು ಈಗಾಗಲೇ ಕೇಂದ್ರ ಸರ್ಕಾರ ತಿಳಿಸಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಕುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss