ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿಗಳು 50 ಜನ ಕಾಂಗ್ರೆಸ್‌ನ ಶಾಸಕರನ್ನು ಖರೀದಿ ಮಾಡುತ್ತೇವೆ ಅಂತ ಆರೋಪ ಮಾಡಿದ್ದಾರೆ. 50 ಶಾಸಕರ ಖರೀದಿಗೆ 2,500 ಕೋಟಿ ರೂ. ಬೇಕಾಗುತ್ತದೆ. ಯಾರ ಬಳಿ ಇದೆ ಅಷ್ಟೊಂದು ಹಣ? ಎಂದು ಸಂಸದ ಬಸವರಾಜ್ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣಿಯೊಬ್ಬರು ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬಂದಾಗ ಆಧಾರ ರಹಿತ ಆರೋಪ ಮಾಡುತ್ತಾರೆ. ಆಪಾದನೆಯಿಂದ ಮುಕ್ತಿ ಹೊಂದಲು ಅವರು ಹೀಗೆ ಹೇಳುತ್ತಾರೆ. ಅವರು ಬಹಳ ಗೊಂದಲದಿಂದ ಹತಾಶರಾಗಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.