ರಾಜ್ಯದಲ್ಲಿ ಇಂದು 252 ಮಂದಿಗೆ ಕೋವಿಡ್ ಪಾಸಿಟಿವ್ : ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 252 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ದೃಢಪಟ್ಟಿದೆ. ಇಬ್ಬರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 7359 ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳಊರು 172, ಹಾಸನ 20, ಮೈಸೂರು 08 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 252 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ ಎಂದಿದೆ.

ಇಂದು 441 ಸೋಂಕಿತರು ಗುಣಮುಖರಾಗಿದ್ದಾರೆ.ಸಕ್ರೀಯ ಸೋಂಕಿತರ ( Covid19 Case ) ಸಂಖ್ಯೆ 1031ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.3.42ರಷ್ಟಿದೆ ಎಂಬುದಾಗಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!