ಡಾಲಿ ಧನಂಜಯ್ ನಟನೆಯ 25ನೇ ಚಿತ್ರದ ಪೋಸ್ಟರ್‌ ರಿಲೀಸ್‌! ಯಾವ ಚಿತ್ರ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾಲಿ ಧನಂಜಯ್: ಟಗರು ಚಿತ್ರದ ಮೂಲಕ ಚಿತ್ರರಂಗದಲ್ಲಿ ಖಳನಾಯಕನ ಪಾತ್ರ ಮಾಡಿದ ಡಾಲಿ ಈಗ ಬಹುಭಾಷಾ ನಟರಾಗಿದ್ದಾರೆ. ಈಗ ಹೊಸ ಸಿನಿಮಾವೊಂದರ ಮೊದಲ ಪೋಸ್ಟರ್ ರಿಲೀಸ್ ಮಾಡಿದ್ದಾರೆ.
ಖಡಕ್ ಪೊಲೀಸ್ ಅಧಿಕಾರಿಯಾಗಿ ಡಾಲಿ ಧನಂಜಯ್ ಕಾಣಿಸಿಕೊಳ್ಳಲಿದ್ದು, ಈ ಚಿತ್ರಕ್ಕೆ ಹೊಯ್ಸಳ ಎಂದು ಹೆಸರಿಡಲಾಗಿದೆ. ಸಂಕ್ರಾಂತಿ ಹಬ್ಬದಂದೆ ಡಾಲಿ ಧನಂಜಯ್ ಅವರ 25ನೇ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ.
ಈ ಚಿತ್ರಕ್ಕೆ ವಿಜಯ್ ಎನ್ ನಿರ್ದೇಶನ ಮಾಡಲಿದ್ದು, ಕಾರ್ತಿಕ್ ಮತ್ತು ಯೋಗಿ ಜಿ. ರಾಜ್ ಚಿತ್ರದ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ಸಂಸ್ಥಾಪಕ ವಿಜಯ್ ಕಿರಗಂದೂರು ಅವರಿಗೆ ಅರ್ಪಿಸಲಾಗಿದೆ.
ಈಗಾಗಲೇ ಚಿತ್ರದ ಶೂಟಿಂಗ್ ಗೆ ಎಲ್ಲಾ ತಯಾರಿ ನಡೆದಿದ್ದು, ಏಪ್ರಿಲ್ ನಲ್ಲಿ ಶೂಟಿಂಗ್ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!