ಬೆಂಗಳೂರು ವಿಮಾನ ನಿಲ್ದಾಣದಲ್ಲಿ 26 ಕೋಟಿ ರೂ. ಮೌಲ್ಯದ ಕೊಕೇನ್ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ಇಲಾಖೆ ಭಾರೀ ಕಾರ್ಯಾಚರಣೆ ನಡೆಸಿದೆ. ಬೆಂಗಳೂರಿನಿಂದ ದೆಹಲಿಗೆ ಅಕ್ರಮವಾಗಿ 26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಕೊಕೇನ್‌ನೊಂದಿಗೆ ಮಹಿಳೆಯನ್ನು ಬಂಧಿಸಿದ್ದಾರೆ. ಮಹಿಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಬೆಂಗಳೂರಿನ ಡಿಆರ್‌ಐ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಪ್ರವಾಸಿ ವೀಸಾದಲ್ಲಿ ದೇಶಕ್ಕೆ ಬಂದಿದ್ದ ಕೀನ್ಯಾ ಮೂಲದ 36 ವರ್ಷದ ಮಹಿಳೆಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಮಹಿಳೆ ತನ್ನ ಲಗೇಜ್ ಬ್ಯಾಗ್‌ನಲ್ಲಿ ಬಚ್ಚಿಟ್ಟು ಬೆಂಗಳೂರಿನಿಂದ ದೆಹಲಿಗೆ ಕೊಕೇನ್ ಸಾಗಿಸಲು ಯತ್ನಿಸಿದ್ದಾಳೆ. ದೆಹಲಿಗೆ ಇಂಡಿಗೋ ವಿಮಾನದಲ್ಲಿ ತಪಾಸಣೆ ಮಾಡುವಾಗ ಸಿಕ್ಕಿಬಿದ್ದಿದ್ದಾಳೆ. ಮಹಿಳೆಯಿಂದ ಕೊಕೇನ್ ವಶಪಡಿಸಿಕೊಂಡ ಅಧಿಕಾರಿಗಳು ಬೆಂಗಳೂರಿನ ಡಿಆರ್‌ಐ ಕಚೇರಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!