ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಕ್ಕಿನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭೀಕರ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ೨೬ಕ್ಕೆ ಏರಿಕೆಯಾಗಿದೆ.
ಈವರೆಗೂ ಒಟ್ಟಾರೆ 142 ಮಂದಿ ನಾಪತ್ತೆಯಾಗಿದ್ದು, 12 ಸಾವಿರಕ್ಕೂ ಹೆಚ್ಚು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. 25 ಸಾವಿರಕ್ಕೂ ಹೆಚ್ಚು ಮಂದಿ ಪ್ರವಾಹದಿಂದ ಸಮಸ್ಯೆ ಎದುರಿಸುತ್ತಿದ್ದು,13 ಸೇತುವೆಗಳು ಮುಳುಗಿ ಹೋಗಿವೆ.
ಪ್ರವಾಹದಲ್ಲಿ ಮೃತಪಟ್ಟ 26 ಮಂದಿಯ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಪ್ರೇಮ್ ಸಿಂಗ್ ಘೋಷಿಸಿದ್ದಾರೆ. 22 ಪರಿಹಾರ ಕೇಂದ್ರಗಳನ್ನು ಸ್ಥಾಪನೆ ಮಾಡಿದ್ದು, ಆರು ಸಾವಿರಕ್ಕೂ ಹೆಚ್ಚು ಮಂದಿ ಆಶ್ರಯ ಪಡೆಯುತ್ತಿದ್ದಾರೆ.