ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರ ಬೆಳಗ್ಗೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಬಳಿ ಬಸ್‌ನೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 26 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ.
“ಅಪಘಾತದಲ್ಲಿ ಒಟ್ಟು 26 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ರಾಯ್‌ಗಢ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ”.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.