ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಗುಜರಾತ್‌ಗೆ ತೆರಳುತ್ತಿದ್ದ ಬಸ್ ಸ್ಕಿಡ್ ಆಗಿ 8 ಅಡಿ ಆಳಕ್ಕೆ ಬಿದ್ದು ಪಲ್ಟಿಯಾದ ಪರಿಣಾಮ ಕನಿಷ್ಠ 26 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶನಿವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರ ಪ್ರಕಾರ ಬಸ್ ಇಂದೋರ್‌ನಿಂದ ಗುಜರಾತ್‌ನ ರಾಜ್‌ಕೋಟ್‌ಗೆ ತೆರಳುತ್ತಿತ್ತು. ಉಜ್ಜಯಿನಿಯ ಭೂಖಿ ಮಾತಾ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.