ಕೊಡಗು ಜಿಲ್ಲೆಯಲ್ಲಿ 26 ಹೊಸ ಕೋವಿಡ್ ಪ್ರಕರಣ ‌ದೃಢ, ಒಂದು ಸಾವು

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಸೋಮವಾರ 26 ಹೊಸ ಕೋವಿಡ್ ಪ್ರಕರಣ ದೃಢಪಟ್ಟಿದೆ.ಅಲ್ಲದೆ ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ5, ಸೋಮವಾರಪೇಟೆ ತಾಲೂಕಿನಲ್ಲಿ ‌7, ವೀರಾಜಪೇಟೆ ತಾಲೂಕಿನಲ್ಲಿ ‌14 ಪ್ರಕರಣಗಳು ವರದಿಯಾಗಿವೆ‌.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ 47,300ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 185ಮಂದಿ ಗುಣಮುಖರಾಗಿದ್ದಾರೆ. ಅಲ್ಲದೆ ಒಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಇದುವರೆಗೆ ಒಟ್ಟು 45,891 ಮಂದಿ ಗುಣಮುಖರಾದಂತಾಗಿದ್ದು, ಸತ್ತವರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 964 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 142 ಹಾಗೂ ಪಾಸಿಟಿವಿಟಿ ದರ ಶೇ. 6.74ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!