ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದ್ದು, ಧಾರವಾಡದಲ್ಲಿ 26 ವರ್ಷದ ಯುವತಿಯು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಧಾರವಾಡ ಪುರೋಹಿತ್ ನಗರದ ಜೀವಿತಾ ಕುಸಗೂರ (26) ಹೃದಯಾಘಾತದಿಂದ ಸಾವನ್ನಪ್ಪಿದ್ದ ಯುವತಿ.
ಮಂಗಳವಾರ ಬೆಳಗ್ಗೆ ಮನೆಯಲ್ಲಿ ತಲೆ ಸುತ್ತು ಬಂದು ಜೀವಿತಾ, ಸುಸ್ತಾಗಿ ಕುಳಿತಿದಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆದರೆ ಜೀವಿತಾ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರು ಹೃದಯಾಘಾತದಿಂದಲೇ ಜೀವಿತಾ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಕೃಷಿಯಲ್ಲಿ ಎಂಎಸ್‌ಸಿ ಸ್ನಾತಕೋತ್ತರ ಪದವಿ ಓದಿದ್ದ ಜೀವಿತಾ, ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು.