ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 267 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,925 ರಿಂದ 3,736ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
ಎರಡು ಸಾವಿನ ಪ್ರಕರಣಗಳೊಂದಿಗೆ ಸಾವಿನ ಸಂಖ್ಯೆ 5,31,874ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೂ ಕೋವಿಡ್ ಪ್ರಕರಣಗಳ ಸಂಖ್ಯೆ 4.49 ಕೋಟಿ (4,49,91,143) ದಾಖಲಾಗಿದೆ.
ಇಲ್ಲಿಯವರೆಗೆ ಕೋವಿಡ್‌ನಿಂದ ಗುಣಮುಖರಾದವರ ಸಂಖ್ಯೆ 4,44,55,533 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.18 ರಷ್ಟಿದೆ.