ರಾಜ್ಯದಲ್ಲಿ ಇಂದು 268 ಕೊರೋನಾ ಪಾಸಿಟಿವ್, ಸೋಂಕಿನ ಪ್ರಮಾಣ 0.70%

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು 268 ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,41,063ಕ್ಕೆ ಏರಿಕೆಯಾಗಿದೆ.
1,119 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 38,95,452ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಸದ್ಯ 5,623 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು 14 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 39,950ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.70 ರಷ್ಟಿದ್ದು, ಮರಣ ಪ್ರಮಾಣ ಶೇ. 5.22 ರಷ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!