ಚೀನಾದಲ್ಲಿ ಜವರಾಯನ ಅಟ್ಟಹಾಸ:ಭೀಕರ ರಸ್ತೆ ಅಪಘಾತದಲ್ಲಿ 27 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ನಡೆದ ರಸ್ತೆ ಅಪಘಾತದಲ್ಲಿ 27 ಮಂದಿ ಸಾವನ್ನಪ್ಪಿದ್ದು, ಇನ್ನೂ 20 ಮಂದಿ ಗಾಯಗೊಂಡಿರುವ ಘಟನೆ ನೈಋತ್ಯ ಚೀನಾದಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

47ಮಂದಿ ಪ್ರಯಾಣಿಸುತ್ತಿದ್ದ ಬಸ್‌ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಈ ವರ್ಷ ದೇಶದಲ್ಲಿ ನಡೆದ ಅತ್ಯಂತ ಭೀಕರ ರಸ್ತೆ ಅಪಘಾತ ಎಂದು ಬಣ್ಣಿಸಿದರು. ಭಾನುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಮಾಹಿತಿ ಲಭಿಸಿದ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದ ಗುಝೌ ಪ್ರಾಂತ್ಯದ ಸ್ಯಾಂಡು ಕೌಂಟಿಯ ಎಕ್ಸ್‌ಪ್ರೆಸ್‌ವೇಯಲ್ಲಿ ಈ ದುರ್ಘಟನೆ ನಡೆದಿದೆ. ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರಸ್ತೆಗೆ ಅಪ್ಪಳಿಸಿದೆ. ಪರ್ವತ ಪ್ರದೇಶವಾದ ಇಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಈ ವರ್ಷದ ಜೂನ್‌ನಲ್ಲಿ, ಗೈಝೌ ಪ್ರಾಂತ್ಯದಲ್ಲಿ ಹೈಸ್ಪೀಡ್ ರೈಲು ಹಳಿತಪ್ಪಿ ಚಾಲಕ ಸಾವನ್ನಪ್ಪಿದ್ದರು ಎನ್ನಲಾಗಿದೆ. ಪೊಲೀಸರು ಇದೀಗ ಬಸ್ ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!