ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರದ ಹಲ್ದಿಯಾ ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 27 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಭಾನುವಾರ ಮಧ್ಯಾಹ್ನ ತೈಲ ಟ್ಯಾಂಕರ್ ಮತ್ತು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (ಎಸ್‌ಬಿಎಸ್‌ಟಿಸಿ) ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಟೊಮ್ಲುಕ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದ್ದು, ಅಲ್ಲಿ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಈ ಅಚಾತುರ್ಯ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.