ಅಸ್ಸಾಂ ಸೆಮಿಕಂಡಕ್ಟರ್ ಘಟಕಕ್ಕೆ 27 ಸಾವಿರ ಕೋಟಿ ರೂ. ಹೂಡಿಕೆ: ಖುಷಿ ಹಂಚಿಕೊಂಡ ಟಾಟಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಹುನಿರೀಕ್ಷಿತ ಅಸ್ಸಾಂನ ಜಗಿರೋಡ್‌ನಲ್ಲಿ ಸ್ಥಾಪನೆಯಾಗುತ್ತಿರುವ ಸೆಮಿ ಕಂಡಕ್ಟರ್ ಘಟಕಕ್ಕೆ ದೇಶದ ಪ್ರತಿಷ್ಠಿತ ಟಾಟಾ ಸಂಸ್ಥೆಯು ಬರೋಬ್ಬರಿ 27 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತಿದೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಖುಷಿ ಹಂಚಿಕೊಂಡಿರುವ ಟಾಟಾ ಸಮೂಹದ ಮುಖ್ಯಸ್ಥ ರತನ್‌ಟಾಟಾ, ಸೆಮಿಕಂಡಕ್ಟರ್ ಉತ್ಪಾದನೆಯ ಮೂಲಕ ಅಸ್ಸಾಂ ರಾಜ್ಯವು ವಿಶ್ವ ಭೂಪಟದಲ್ಲಿ ರಾರಾಜಿಸಲಿದೆ ಎಂದು ಆಶಿಸಿದ್ದಾರೆ.

ಅಸ್ಸಾಂ ರಾಜ್ಯದ ಒಡಂಬಡಿಕೆಯಲ್ಲಿ ಟಾಟಾ ಸಮೂಹದ ಹೂಡಿಕೆಯು ಅತ್ಯಾಧುನಿಕ ಸೆಮಿಕಂಡಕ್ಟರ್‌ಗಳ ಉತ್ಪಾದನೆಯಲ್ಲಿ ಅಸ್ಸಾಂ ರಾಜ್ಯವನ್ನು ಪ್ರಮುಖ ಸ್ಥಾನದಲ್ಲಿ ನಿಲ್ಲಿಸಲಿದೆ ಎಂದು ತಾವು, ಅಸ್ಸಾಂ ಸಿಎಂ ಹಿಮಂತ ಶರ್ಮಾ ಹಾಗೂ ಟಾಟಾ ಸನ್ಸ್ ಮುಖ್ಯಸ್ಥ ಎನ್. ಚಂದ್ರಶೇಖರನ್ ಇರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!