Monday, October 2, 2023

Latest Posts

ಹುಬ್ಬಳ್ಳಿಯ ವಿಮಾನ ನಿಲ್ದಾಣದ ಟರ್ಮಿನಲ್‌ ಅಭಿವೃದ್ಧಿಗೆ ಕೇಂದ್ರದಿಂದ ಸಿಕ್ಕಿತು 273 ಕೋಟಿ ರೂಪಾಯಿ ಅನುದಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹುಬ್ಬಳ್ಳಿಯ ವಿಮಾನ ನಿಲ್ದಾಣದ ಟರ್ಮಿನಲ್‌ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 273 ಕೋಟಿ ರೂಪಾಯಿ ಅನುದಾನವನ್ನು ನೀಡಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಈಗ ಒಂದು ಹೆಜ್ಜೆ ಮುಂದುವರೆದು 273 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ನೂತನ ಯೋಜನೆಯಂತೆ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ ವಿಸ್ತರಣೆಗೊಳ್ಳಲಿದೆ. ನೆಲಮಹಡಿ ಹಾಗೂ ಮೊದಲ ಮಹಡಿ ಸೇರಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಏಕಕಾಲಕ್ಕೆ 1,400ಕ್ಕೂ ಅಧಿಕ ಪ್ರಯಾಣಿಕರನ್ನು (ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ.

ಎರಡು ವರ್ಷಗಳಲ್ಲಿ ಪೂರ್ಣ
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಸಂಬಂಧಿಸಿದಂತೆ ನಮ್ಮ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ ರೂ.273 ಕೋಟಿ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರಿಗೆ ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು. ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ ವಿಸ್ತರಣೆ ಕಾಮಗಾರಿಯು ಅಧಿಕೃತವಾಗಿ ಜನವರಿಯಲ್ಲಿ ಆರಂಭವಾಗಲಿದ್ದು, ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!