ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ: ಓರ್ವ ಸಾವು, 28 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿದ್ದಾರೆ.

ಮೃತರನ್ನು ಆಶಿಶ್ (11) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಸ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್‌ಪುರ ಗ್ರಾಮದ ಬಳಿಯ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ.

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!