ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ನೀಡುವ ಊಟದಲ್ಲಿ ಪರಿಷ್ಕರಣೆಗೆ 280 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ವಾರದಲ್ಲಿ ಎರಡು ಬಾರಿ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಣೆಗೆ ಮಾಡಲು ನಿರ್ಧಾರ ಮಾಡಲಾಗಿದೆ. 9,10ನೇ ತರಗತಿ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ಹಾಗೂ ಚಿಕ್ಕಿ ನೀಡಲಾಗುತ್ತದೆ.