October 16, 2026
Friday, October 16, 2026
spot_img

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 2,800 ರೈತರ ಆತ್ಮ*ಹತ್ಯೆ : ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವ ಆಡ್ತಿದೆ. ಆದರೆ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 2,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು, ಶಾಸಕರು ದೆಹಲಿಯಲ್ಲಿ ಜಾಲಿ ಅಂತ ಟ್ರಿಪ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಶೇ.80ರಷ್ಟು ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ರೈತರು ದನ-ಕರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಮತ್ತು ಡಿಸಿಎಂ ಬೆಳೆ ಬೆಳೆಯಬೇಡಿ ಎನ್ನುತ್ತಿದ್ದಾರೆ. ಹಾಗಾದರೆ ರೈತರು ಏನು ಮಾಡಬೇಕು? ರೈತರಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡುತ್ತೀರಾ ಎಂದು ಪ್ರಶ್ನಿಸಿದರು.ಕಾಂಗ್ರೆಸ್‌ ಬಿಜೆಪಿ ನೋಡಿ ಕಲಿಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡು ಪರಿಹಾರ ನೀಡಲಾಗಿತ್ತು. ಈಗ ಸರ್ಕಾರ ಬರ ಘೋಷಣೆ ಮಾಡುವಲ್ಲಿಯೂ ವಿಳಂಬ ಮಾಡುತ್ತಿದೆ ಎಂದು ಟೀಕಿಸಿದರು.

Must Read