ರಾಜ್ಯ ಸರ್ಕಾರದಿಂದ ಎಸ್.ಸಿ-ಎಸ್.ಟಿ ಸಮುದಾಯಗಳಿಗೆ 28,000 ಕೋಟಿ ಅನುದಾನ

ಹೊಸ ದಿಗಂತ ವರದಿ, ಕಲಬುರಗಿ:

ಎಸ್.ಸಿ. – ಎಸ್.ಟಿ. ಸಮುದಾಯಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ರೂ. 28,000 ಕೋಟಿ ಅನುದಾನವನ್ನು ಪರಿಶಿಷ್ಟರ ಜಾತಿ ಮತ್ತು ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಅನುಮೋದಿಸಿರುವುದು ಒಂದು ಮಹತ್ತರ ನಿರ್ಧಾರ ಎಂದು ಬಿಜೆಪಿ ರಾಜ್ಯ ವಕ್ತಾರ, ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಸ್ವಾಗತಿಸಿದ್ದಾರೆ.

ಶ್ರೀ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೂ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು ಅನುದಾನ ವಿಷಯದಲ್ಲಿ ಕೇವಲ ಬಾಯಿ ಮಾತನ್ನಷ್ಟೆ ಆಡುತ್ತಿದ್ದು, ಎಸ್.ಸಿ. – ಎಸ್.ಟಿ. ಸಮುದಾಯವನ್ನು ಕೇವಲ ಮತಬ್ಯಾಂಕಾಗಿ ಬಳಸಿಕೊಳ್ಳುತ್ತಿದ್ದರು. ಆದರೆ ಮುಖ್ಯಮಂತ್ರಿ ಶ್ರೀ ಬಸವರಾಜ್ ಎಸ್. ಬೊಮ್ಮಾಯಿ ಮತ್ತು ಸಮಾಜ ಕಲ್ಯಾಣ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರ ಅನುದಾನ ನೀಡಿಕೆ ನಿರ್ಧಾರ ಅತ್ಯಂತ ಪ್ರಮುಖವಾಗಿದೆ ಎಂದು ತಿಳಿಸಿದ್ದಾರೆ.

ನೈಜ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ಲಭಿಸುವಂತೆ ಗರಿಷ್ಠ ಪ್ರಯತ್ನ ಮಾಡುತ್ತಿದ್ದು, ಇದರಿಂದಾಗಿ ಸಮುದಾಯಗಳು ಬಿಜೆಪಿ ಪರ ಒಲವು ತೋರಿಸಿವೆ. ಕಾಂಗ್ರೆಸ್ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಲಕಚ್ಚಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!