Monday, September 25, 2023

Latest Posts

ಇಬ್ಬರು ಪಾಕ್ ಸ್ಮಗ್ಲರ್‌ಗಳ ಬಂಧನ: ಭಾರೀ ಪ್ರಮಾಣದ ಹೆರಾಯಿನ್ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಂಜಾಬ್‌ನ ಪಾಕಿಸ್ತಾನ ಗಡಿಯಲ್ಲಿ ಇಬ್ಬರು ಪಾಕಿಸ್ತಾನಿ ಕಳ್ಳಸಾಗಣೆದಾರರನ್ನು ಅಧಿಕಾರಿಗಳು ಬಂಧಿಸಿದ್ದಾರೆ. BSF ಮತ್ತು ಪಂಜಾಬ್ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಫಿರೋಜ್‌ಪುರದ ಅಂತಾರಾಷ್ಟ್ರೀಯ ಗಡಿಯಲ್ಲಿ ಸೋಮವಾರ ಇಬ್ಬರು ಪಾಕಿಸ್ತಾನಿ ಕಳ್ಳಸಾಗಣೆದಾರರು ಸಿಕ್ಕಿವಿದ್ದರು. ಬಂಧಿತರಿಂದ 29 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ತಪ್ಪಿಸಿಕೊಳ್ಳುತ್ತಿದ್ದ ಕಳ್ಳಸಾಗಾದಾರರ ಮೇಲೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿದ್ದು, ಒಬ್ಬನಿಗೆ ಬುಲೆಟ್ ತಗುಲಿ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ಎಫ್ ಮತ್ತು ಪಂಜಾಬ್ ಪೊಲೀಸರು ಮಧ್ಯರಾತ್ರಿಯಿಂದ ಗಟ್ಟಿಮಾಟರ್ ಗ್ರಾಮದ ಬಳಿ ಸಟ್ಲೆಜ್ ನದಿಯ ದಡದಲ್ಲಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳ್ಳಸಾಗಣೆದಾರರು 26 ಪ್ಯಾಕೆಟ್‌ಗಳಲ್ಲಿ, 29.26 ಕಿಲೋಗ್ರಾಂಗಳಷ್ಟು ಹೆರಾಯಿನ್ ಸಾಗಿಸುತ್ತಿದ್ದರು.  ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!