ಮಣಿಪುರ ಹಿಂಸಾಚಾರ: ತನಿಖಾ ತಂಡದಲ್ಲಿದ್ದಾರೆ 29 ಲೇಡಿ ಆಫೀಸರ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಣಿಪುರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಸಿಬಿಐ ನೇಮಿಸಿದ 53 ಅಧಿಕಾರಿಗಳ ವಿಶೇಷ ತಂಡದಲ್ಲಿ 29 ಮಹಿಳಾ ಅಧಿಕಾರಿಗಳನ್ನೂ ಫೀಲ್ಡಿಗಿಳಿಸಿದ್ದಾರೆ. ಮೂವರು ಡಿಐಜಿಗಳಾದ ಲವ್ಲಿ ಕಟಿಯಾರ್, ನಿರ್ಮಲಾ ದೇವಿ, ಮೋಹಿತ್ ಗುಪ್ತಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ವೀರ್ ಅವರನ್ನೊಳಗೊಂಡ ತಂಡವು ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರಿಗೆ ವರದಿ ಸಲ್ಲಿಸಲಿದ್ದು, ಒಟ್ಟಾರೆ ತನಿಖೆಯ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಸಿಬಿಐ ತಿಳಿಸಿದೆ.

ಇಷ್ಟು ದೊಡ್ಡ ಸಂಖ್ಯೆಯ ಮಹಿಳಾ ಅಧಿಕಾರಿಗಳ ಏಕಕಾಲದಲ್ಲಿ ತನಿಖೆ ನಡೆಸುತ್ತಿರುವುದು ಇದೇ ಮೊದಲು. ಸಿಬಿಐ ತನಿಖೆ ನಡೆಸುತ್ತಿರುವ ಈ ಪ್ರಕರಣಗಳಲ್ಲಿ ಹೆಚ್ಚಿನವು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ, 1989ರ ನಿಬಂಧನೆಗಳ ಅಡಿಯಲ್ಲಿವೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಆರು ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಎಲ್ಲರೂ ಮಹಿಳೆಯರು. ಈ ಸಿಬಿಐ ತಂಡದಲ್ಲಿ 16 ಇನ್ಸ್ಪೆಕ್ಟರ್ ಗಳು ಮತ್ತು 10 ಸಬ್ ಇನ್ಸ್ಪೆಕ್ಟರ್‌ಗಳೂ ಇದ್ದಾರೆ. ನಿಸ್ಪಕ್ಷಪಾತ ವರದಿಗಾಗಿ ಮಣಿಪುರ ಪ್ರಕರಣದಲ್ಲಿ ಸ್ಥಳೀಯ ಅಧಿಕಾರಿಗಳನ್ನು ತನಿಖೆಯಿಂದ ದೂರ ಇಡಲಾಗಿದೆ.

ಮೇ 4ರಂದು ಗುಂಪೊಂದು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಘಟನೆಯ ಜೊತೆಗೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಇನ್ನೂ 9 ಪ್ರಕರಣಗಳ ತನಿಖೆಗೆ ಸಿಬಿಐ ಸಿದ್ಧವಾಗಿದೆ. ಇದರೊಂದಿಗೆ ಸಂಸ್ಥೆ ತನಿಖೆ ನಡೆಸುತ್ತಿರುವ ಒಟ್ಟು ಪ್ರಕರಣಗಳ ಸಂಖ್ಯೆ 17ಕ್ಕೆ ಏರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!