ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಜ.8) 295 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಶನಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾರೂ ಮೃತ ಪಟ್ಟಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
14 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 994 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 2.91ಕ್ಕೆ ಏರಿಕೆ ಆಗಿದೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92,204 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,11,46,630 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆ ತನಕ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಶನಿವಾರ ಮತ್ತು ಭಾನುವಾರ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ ಪಾಯಿಂಟ್ಗಳನ್ನು ತೆರೆಯಲಾಗಿದೆ. ಸೋಂಕು ತಡೆಗಾಗಿ ಕೋವಿಡ್ ಶಿಷ್ಟಾಚಾರ ಪಾಲಿಸುವಂತೆ ಜಿಲ್ಲಾಡಳಿತ ಜನತೆಗೆ ತಿಳಿಸಿದೆ.