ರಾಜ್ಯದಲ್ಲಿ ಇಂದು 298 ಜನರಿಗೆ ಕೊರೋನಾ ಪಾಸಿಟಿವ್: ನಾಲ್ವರು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು ದಾಖಲೆಯ 298 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಇಂದು ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 6900 ಹಾಗೂ RAT ಪರೀಕ್ಷೆ ಮೂಲಕ 891 ಜನರು ಸೇರಿದಂತೆ 7791 ಮಂದಿಯನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಿರುವುದಾಗಿ ತಿಳಿಸಿದೆ.

ಬೆಂಗಳೂರಲ್ಲಿ 172, ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 3, ಗದಗ 1, ಹಾಸನ 19, ಕಲಬುರ್ಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6, ಮಂಡ್ಯ 11, ಮೈಸೂರು 18, ರಾಯಚೂರು 1, ರಾಮನಗರ 2, ಶಿವಮೊಗ್ಗ 3, ತುಮಕೂರು 5, ಉತ್ತರ ಕನ್ನಡ 4, ವಿಜಯನಗರ 5 ಸೇರಿದಂತೆ 298 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ ಧಾರವಾಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಹಾಗೂ ಬೆಂಗಳೂರಲ್ಲಿ ಇಬ್ಬರು ಸೇರಿದಂತೆ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 298 ಮಂದಿಗೆ ಸೋಂಕು ದೃಢಪಟ್ಟ ಕಾರಣ, ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!