ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ 2ನೇ ಬಂಧನ ವಾರೆಂಟ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್ (ICT) ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಮತ್ತು ಮಾಜಿ ಮಿಲಿಟರಿ ಜನರಲ್‌ಗಳು ಮತ್ತು ಮಾಜಿ ಪೊಲೀಸ್ ಮುಖ್ಯಸ್ಥರು ಸೇರಿದಂತೆ 11 ಇತರರ ವಿರುದ್ಧ ಬಲವಂತದ ನಾಪತ್ತೆ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಎರಡನೇ ಬಂಧನ ವಾರೆಂಟ್ ಹೊರಡಿಸಿದೆ.

ಈ ಹೊಸ ಬಂಧನ ವಾರಂಟ್ ನ್ನು ಜನವರಿ 6 ರಂದು ಹೊರಡಿಸಲಾಗಿದೆ. ಶೇಖ್ ಹಸೀನಾ ಪದಚ್ಯುತಿಯ ಬಳಿಕ ಭಾರತದಲ್ಲಿ ಆಶ್ರಯ ಪಡೆದಿದ್ದು, ಅವರ ವಿರುದ್ಧ ಹೊರಡಿಸಲಾದ ಎರಡನೇ ಬಂಧನ ವಾರೆಂಟ್ ಇದಾಗಿದೆ.

ಬಾಂಗ್ಲಾ ನ್ಯಾಯಮಂಡಳಿಯು ಹಸೀನಾ ವಿರುದ್ಧ ಇದುವರೆಗೆ ಮೂರು ಪ್ರಕರಣಗಳನ್ನು ದಾಖಲಿಸಿದೆ.

ನೂರಾರು ಬಲವಂತದ ನಾಪತ್ತೆ ಪ್ರಕರಣದ ಸಂಬಂಧ ಹಸೀನಾ ಸೇರಿದಂತೆ 12 ವ್ಯಕ್ತಿಗಳನ್ನು ಬಂಧಿಸಿ ಫೆಬ್ರವರಿ 12 ರಂದು ನ್ಯಾಯಾಧಿಕರಣದ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯದ ಆದೇಶ ಪೊಲೀಸ್ ಮಹಾನಿರೀಕ್ಷಕರಿಗೆ ನಿರ್ದೇಶಿಸುತ್ತದೆ. ಪ್ರಕರಣದಲ್ಲಿ ಹೆಸರಿಸಲಾದವರಲ್ಲಿ ಹಸೀನಾ ಅವರ ಮಾಜಿ ರಕ್ಷಣಾ ಸಲಹೆಗಾರ, ಮೇಜರ್ ಜನರಲ್ (ನಿವೃತ್ತ) ತಾರಿಕ್ ಅಹ್ಮದ್ ಸಿದ್ದಿಕ್ ಮತ್ತು ಮಾಜಿ ಐಜಿಪಿ ಬೆನಜೀರ್ ಅಹ್ಮದ್ ಸೇರಿದ್ದಾರೆ. ಪ್ರಸ್ತುತ ಸಿದ್ದಿಕ್ ಬಂಧನದಲ್ಲಿದ್ದು, ಅಹ್ಮದ್ ಪರಾರಿಯಾಗಿದ್ದಾರೆ ಎಂದು ನಂಬಲಾಗಿದೆ.

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಎರಡನೇ ಬಂಧನ ವಾರಂಟ್ ಹೊರಡಿಸಿದ ಕುರಿತು ಮಾತನಾಡಿರುವ ಭಾರತದ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷ ವಿಕಾಸ್ ಸಿಂಗ್, ‘ಅಂತಾರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್ ಬಾಂಗ್ಲಾದೇಶದಲ್ಲಿ ದೇಶೀಯ ಕಾನೂನಿನ ಆಧಾರದ ಮೇಲೆ ಸ್ಥಾಪಿಸಲಾದ ನ್ಯಾಯಮಂಡಳಿಯಾಗಿದೆ. ನ್ಯಾಯಾಲಯವು ಕೆಲವು ಅಂತರರಾಷ್ಟ್ರೀಯ ಅಪರಾಧಗಳನ್ನು ಗುರುತಿಸುತ್ತದೆ ಮತ್ತು ಈ ಬಂಧನ ವಾರಂಟ್ ಬಾಂಗ್ಲಾದೇಶದ ದೇಶೀಯ ನ್ಯಾಯಾಲಯ ಹೊರಡಿಸಿರುವ ಬಂಧನ ವಾರಂಟ್ ಆಗಿದೆ. ಈ ವಾರೆಂಟ್ ಜಾರಿಯಾಗಬೇಕಾದರೆ ಆಕೆ ಭಾರತದಿಂದ ಹಸ್ತಾಂತರ ಆಗಬೇಕು. ಭಾರತದಿಂದ ಹಸ್ತಾಂತರಿಸಿದ ನಂತರವೇ ಈ ವಾರಂಟ್ ನ್ನು ಜಾರಿಗೆ ತರಬಹುದು ಎಂದು ಹೇಳಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!