ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡುತ್ತೇವೆ ಎಂದು ಜೆಡಿಎಸ್ ಹಿರಿಯ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಏ.19 ರಂದು ನಾಮಪತ್ರ ಸಲ್ಲಿಸುತ್ತೇನೆ, ಹಾಸನ ವಿಚಾರದಲ್ಲಿ ನನ್ನ ನಿಲುವು ಬದಲಾಗುವುದಿಲ್ಲ. ಹಾಸನ ಕ್ಷೇತ್ರದ ಟಿಕೆಟ್‌ನ್ನು ದೇವೇಗೌಡರು ಫೈನಲ್ ಮಾಡಲಿದ್ದಾರೆ. ಹಾಗಾಗಿ ಉಳಿದ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಜನತೆ ಮೇಲೆ ಹೆಚ್ಚು ವಿಶ್ವಾಸವಿದೆ. ಮನೆ ಮಗನ ರೀತಿ ಅವರು ನನಗೆ ಆಶೀರ್ವಾದ ಮಾಡುತ್ತಾರೆ ಎಂದಿದ್ದಾರೆ.