ಹೊಸದಿಗಂತ ವರದಿ ಬಳ್ಳಾರಿ:
ನಗರದ ಪ್ರತಿಷ್ಠಿತ ಶಾಲೆಗಳಲ್ಲೊಂದಾದ ಸತ್ಯನಾರಾಯಣ ಪೇಟೆಯ ಜೆನಿಸಿಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಶ್ರೀರಕ್ಷಾ ಕುಲಕರ್ಣಿ ಅವರು, ಅಂತರಾಷ್ಟ್ರೀಯ ಚಿತ್ರಕಲಾ ವಿಭಾಗದ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದು, ಪಾಲಕರ, ಕಲಿಸಿದ ಗುರುಗಳ ಹಾಗೂ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಮುಂಬಯಿ ನಗರದಲ್ಲಿ ಇತ್ತೀಚೆಗೆ ನಡೆದ ಇಂಡಿಯನ್ ಟ್ಯಾಲೆಂಟ್ ಓಲಂಪಿಯಾಡ್ ಅಂತರಾಷ್ಟ್ರೀಯ ಡ್ರಾಯಿಂಗ್ ಸ್ಪರ್ಧೆಯಲ್ಲಿ ವರದಿಗಾರ ನರಸಿಂಹ ಮೂರ್ತಿ ಅವರ ಪುತ್ರಿ ಶ್ರೀರಕ್ಷಾ ಕುಲಕರ್ಣಿ ಅವರು ಭಾಗವಹಿಸಿದ್ದು, ರಾಜ್ಯಕ್ಕೆ ಎರಡನೇ ಸ್ಥಾನ ಪಡೆದು ರಾಜ್ಯದ ಹಾಗೂ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ವಿದ್ಯಾರ್ಥಿ ಸಾಧನೆಗೆ ಜಿನೆಸಿಸ್ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಸಂತೋಷ್ ಮಾರ್ಟೀನ್, ಸೇರಿದಂತೆ ಶಾಲೆಯ ಮುಖ್ಯಗುರು, ಶಿಕ್ಷಕರು, ಸಿಬ್ಬಂದಿಗಳು, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ