ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 24ರಿಂದ ಜುಲೈ 5ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ 3ನೇ ಪೂರಕ ಪರೀಕ್ಷೆಯ ಫಲಿತಾಂಶವು ಜು.16ರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಳ್ಳಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಒಟ್ಟು 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ ಕಲಾ ವಿಭಾಗದಿಂದ 30, 811 ಹಾಗೂ ವಿಜ್ಞಾನ ವಿಭಾಗದಲ್ಲಿ 19,783, ವಾಣಿಜ್ಯ ವಿಭಾಗದಿಂದ 25,401 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸಿಸಿ ಕಣ್ಗಾವಲಿನಲ್ಲಿ ರಾಜ್ಯಾದ್ಯಂತ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.
ಫಲಿತಾಂಶ ನೋಡಲು ಈ ಹಂತಗಳನ್ನು ಪಾಲಿಸಿ
-karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
-ಮುಖಪುಟದಲ್ಲಿ ನೀಡಲಾದ ಪಿಯುಸಿ ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
-ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
-ನಿಮ್ಮ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.