ಏಪ್ರಿಲ್‌ 21 ರಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (PUC Examination Results) ಏಪ್ರಿಲ್‌ 21 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಕಳೆದ ಮಾರ್ಚ್‌ 9 ರಿಂದ 29ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ನಡೆದಿತ್ತು. ಸುಮಾರು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದೀಗ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಸದ್ಯ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟ ಮಾಡುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!