ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಕೆಎಸ್​ಆರ್​ಟಿಸಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್‌ :
 
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪರೀಕ್ಷೆ ಬರೆಯಲು (PUC Exam) ತೆರಳಲು ಉಚಿತವಾಗಿ ಬಸ್​​ನಲ್ಲಿ ಸಂಚರಿಸಬಹುದು ಎಂದು ತಿಳಿಸಿದೆ.

ಇತರೆ ವಿದ್ಯಾಸಂಸ್ಥೆಗಳಿಗೆ ತೆರಳುವವರಿಗೂ ಇದು ಅನ್ವಯವಾಗಲಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ.

ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿರುವ ನಿಗಮ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್​ಆರ್​ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್​ಆರ್​ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

ಮಾರ್ಚ್​​ 8ಕ್ಕೆ ಮಹಿಳಾ ದಿನಾಚರಣೆಯಂದು ಮಹಿಳೆಯರು ಬಸ್​​​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತಿಳಿಸಿದೆ. ಆ ದಿನ ಮಹಿಳೆಯರು ನಗರದ ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಬಿಎಂಟಿಸಿ ಬಸ್​​ಗಳಲ್ಲಿ ಪ್ರಯಾಣಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!