ಹೊಸದಿಗಂತ ಡಿಜಿಟಲ್ ಡೆಸ್ಕ್:
2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಕರಾವಳಿ ಜಿಲ್ಲೆಗಳು ತಮ್ಮ ಶೈಕ್ಷಣಿಕ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿವೆ. ರಾಜ್ಯದ ಜಿಲ್ಲಾವಾರು ಫಲಿತಾಂಶ ಪಟ್ಟಿಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಅತ್ಯಧಿಕ ಪಾಸ್ ಪ್ರಮಾಣದೊಂದಿಗೆ ಮೊದಲ ಎರಡು ಸ್ಥಾನಗಳನ್ನು ಅಲಂಕರಿಸಿವೆ.
ಪ್ರತಿ ವರ್ಷದಂತೆ ಈ ವರ್ಷವೂ ಹೆಣ್ಣುಮಕ್ಕಳು ಉತ್ತಮ ಸಾಧನೆ ತೋರಿದ್ದು, ಒಟ್ಟು ಫಲಿತಾಂಶದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳೂ ಗಮನಾರ್ಹ ಸಾಧನೆ ಮಾಡಿದ್ದುವೆ. ಜಿಲ್ಲೆಯ ಶೇಕಡಾವಾರು ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
ಈ ಬಾರಿ ಫಲಿತಾಂಶ ಉತ್ತಮವಾಗುವ ನಿರೀಕ್ಷೆ ಶಿಕ್ಷಣ ಇಲಾಖೆಯಲ್ಲೇ ಇತ್ತು. ಕಳೆದ ವರ್ಷ 35 ಇದ್ದ ಪಾಸಿಂಗ್ ಮಾರ್ಕ್ಸ್ ಅನ್ನು 33ಕ್ಕೆ ಇಳಿಸಲಾಗಿದ್ದರಿಂದ ವಿದ್ಯಾರ್ಥಿಗಳಿಗೆ ಸಹಾಯಕವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ ಒಟ್ಟಾರೆ ಪಾಸ್ ಪ್ರಮಾಣದಲ್ಲಿ ಸ್ಪಷ್ಟ ಏರಿಕೆ ಕಂಡುಬಂದಿದೆ.
ಇದನ್ನೂ ಓದಿ:
ಕಳೆದ 2025ರ ಫಲಿತಾಂಶದಲ್ಲೂ ಉಡುಪಿ ಶೇ. 93.90 ಹಾಗೂ ದಕ್ಷಿಣ ಕನ್ನಡ ಶೇ. 93.57 ಪಾಸ್ ಪ್ರಮಾಣದೊಂದಿಗೆ ಮುಂಚೂಣಿಯಲ್ಲಿದ್ದವು. ಈ ವರ್ಷವೂ ಅದೇ ಟ್ರೆಂಡ್ ಮುಂದುವರಿದಿರುವುದು ಕರಾವಳಿ ಭಾಗದ ಶಿಕ್ಷಣ ಗುಣಮಟ್ಟವನ್ನು ಮತ್ತೆ ಬೆಳಕಿಗೆ ತಂದಿದೆ.
ಇನ್ನೊಂದೆಡೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಇನ್ನೂ ಹಿಂದುಳಿದಿದ್ದು, ಶಿಕ್ಷಣ ಇಲಾಖೆಯ ಮುಂದಿನ ಗಮನ ಅವುಗಳ ಮೇಲೆ ಇರಲಿದೆ. ಜಿಲ್ಲಾವಾರು ಸಂಪೂರ್ಣ ಪಟ್ಟಿಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಪರಿಶೀಲಿಸಬಹುದು.



