ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮೂಲಗಳು ತಿಳಿಸಿವೆ.
ಫಲಿತಾಂಶ ನೋಡುವುದು ಹೇಗೆ?
ದ್ವಿತೀಯ ಪಿಯು ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿಯೂ ಅಪ್ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್ಸೈಟ್ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ. ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ. ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ. ನಂತರ ನೀವು ರಿಸಲ್ಟ್ ನೋಡಬಹುದು.