2nd PUC ಫಲಿತಾಂಶ ಪ್ರಕಟ: ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ, ದ.ಕ.ಜಿಲ್ಲೆಗೆ ಅಗ್ರಸ್ಥಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ.81.15ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 552,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 3,05,212 (84.87%) ಹುಡುಗಿಯರು ಮತ್ತು 2,47,478 (76.98%) ಹುಡುಗರು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಫಲಿತಾಂಶವು ಹಿಂದಿನ ವರ್ಷಕ್ಕಿಂತ 6.48% ಹೆಚ್ಚಳವಾಗಿದೆ.

ದ್ವಿತೀಯ ಪಿಯು ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ.97.37 ಫಲಿತಾಂಶ ಪಡೆದು ರಾಜ್ಯದಲ್ಲೇ ಅಗ್ರಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ ಮತ್ತು ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ. ಗದಗ ಜಿಲ್ಲೆ ಅತ್ಯಂತ ಕಡಿಮೆ ಅಂದರೆ ಶೇ.72.86. ಕೊನೆ ಸ್ಥಾನದಲ್ಲಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್‌ಸೈಟ್ www.karresultsnic.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!