April 9, 2026
Thursday, April 9, 2026
spot_img

2nd PUC Result Out | ದಾಖಲೆ ಮಟ್ಟದಲ್ಲಿ ಫಲಿತಾಂಶ ಸುಧಾರಣೆ: ಶೇ. 86 ವಿದ್ಯಾರ್ಥಿಗಳು ಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಪ್ರಕಟಿಸಿದ ಅಂಕಿಅಂಶಗಳ ಪ್ರಕಾರ, ಒಟ್ಟು ಶೇ. 86 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷದ ಶೇ. 73.45ರ ಫಲಿತಾಂಶಕ್ಕೆ ಹೋಲಿಸಿದರೆ ಇದು ದೊಡ್ಡ ಮಟ್ಟದ ಸುಧಾರಣೆಯಾಗಿದೆ.

ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಇದನ್ನೂ ಓದಿ:

ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯದ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ. ಈ ಸಾಧನೆ ಶಿಕ್ಷಣ ವಲಯದಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯದ 1217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ವಿಜ್ಞಾನ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಸಂಜೆ 6 ಗಂಟೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಸುದ್ದಿಗೋಷ್ಠಿಯಲ್ಲಿ ಸಂಪೂರ್ಣ ಅಂಕಿಅಂಶಗಳನ್ನು ಪ್ರಕಟಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !