ಹೊಸದಿಗಂತ ಡಿಜಿಟಲ್ ಡೆಸ್ಕ್:
2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು.
ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ.
ರಿಸಲ್ಟ್ ನೋಡೋದು ಹೇಗೆ?
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು. 2025 ರ ದ್ವಿತೀಯ ಪಿಯುಸಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.