ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ KSRTC ಬಸ್‌ ಪ್ರಯಾಣ ಉಚಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವಿದ್ಯಾರ್ಥಿಗಳಿಗೆ ಕೆಎಸ್‌ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಆಗಸ್ಟ್‌ 12 ರಿಂದ ಆಗಸ್ಟ್‌ 25 ರವರೆಗೆ ನಡೆಯಲಿದ್ದು, ಈ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ.

ಆದರೆ ಪರೀಕ್ಷೆಗೆ ತೆರಳಲು ಮಾತ್ರ ಈ ಉಚಿತ ಬಸ್ ಪ್ರಯಾಣದ ಅವಕಾಶವಿದೆ. ಅಂದರೆ ಪರೀಕ್ಷಾ ಅವಧಿಯಲ್ಲಿ ಮಾತ್ರ ವಿದ್ಯಾರ್ಥಿಗಳು ಈ ಉಚಿತ ಬಸ್ ಪ್ರಯಾಣದ ಸೇವೆ ಪಡೆಯಬಹುದು.

ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆ ಎಸ್ ಆರ್ ಟಿ ಸಿ ನಿಗಮವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದು, ಈ ಸೌಲಭ್ಯವನ್ನು ಸದುಪಯೋಗಪಡಸಿಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!