ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.
ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಿದ್ದು, https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಿದೆ.
ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡವಾರು ಫಲಿತಾಂಶ 37.08% ಪ್ರಕಟವಾಗಿದೆ.

ಒಟ್ಟಾರೆ 1,85,421 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 307 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇಂದು ಪರೀಕ್ಷೆ ಫಲಿತಾಂಶ ಪ್ರಕಟದ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಪಿಯುಇ ಕರ್ನಾಟಕದ ಅಧಿಕೃತ ಸೈಟ್ ಪರಿಶೀಲಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!