ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟೆಸ್ಟ್ ಪಂದ್ಯ: ಟೀಂ ಇಂಡಿಯಾಗೆ ಭರ್ಜರಿ ಗೆಲುವು, ಸರಣಿ ಸಮಬಲ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು, ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ವಿಕೆಟ್ ಗಳಿಂದ ಸೋಲಿಸುವ ಮೂಲಕ ಭಾರತವು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಸಮಬಲಗೊಳಿಸಿತು. ದಕ್ಷಿಣ ಆಫ್ರಿಕಾ 176 ರನ್ ಗಳಿಗೆ ಆಲೌಟ್ ಆಗಿದ್ದು, ರೋಹಿತ್ ಶರ್ಮಾ ಮತ್ತು ತಂಡವು ಆತಿಥೇಯರನ್ನು 7 ವಿಕೆಟ್ ಗಳಿಂದ ಸೋಲಿಸಿ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತು.

ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಎಂಎಸ್ ಧೋನಿ ನಂತರ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಸೋಲನ್ನು ತಪ್ಪಿಸಿದ ಎರಡನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಸರಣಿಗೂ ಮುನ್ನ ಭಾರತ 1992ರಿಂದೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ಏಳು ಟೆಸ್ಟ್ ಸರಣಿಗಳನ್ನು ಸೋತಿತ್ತು ಮತ್ತು ಒಂದು ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಇದು ಕೇಪ್ ಟೌನ್ ನಲ್ಲಿ ಭಾರತದ ಮೊದಲ ಟೆಸ್ಟ್ ಗೆಲುವಾಗಿದೆ.

https://twitter.com/StarSportsIndia?ref_src=twsrc%5Etfw%7Ctwcamp%5Etweetembed%7Ctwterm%5E1742523938083835991%7Ctwgr%5E3a46b7bc7df04a68301a924871a549b462ec01fa%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-dh71ad7b0a01d347d2a0a68e5f262fdb7d%2Fbreakingdehaliyallimostvaantendhijbulbhayotpaakadanabandhanahizbulmujahideenterrorist-newsid-n571297048

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!