ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.2 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು, ಭಾನುವಾರ ಮುಂಜಾನೆ 7:22ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಕಂಪನ ಬಿಂದುವನ್ನು ಭೂಮಿಯ ಮೇಲ್ಮೈಯಿಂದ 26 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ.
ಇಂದು ಮುಂಜಾನೆ ಅಂಡಮಾನ್ ದ್ವೀಪದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದ್ದು, 10 ಕಿ.ಮೀ ಆಳದಲ್ಲಿ ಕಂಪನ ಬಿಂದುವನ್ನು ಗುರುತಿಸಲಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.