Tuesday, June 28, 2022

Latest Posts

ದೇಶದಲ್ಲಿ 3.29 ಕೋಟಿ ಕೊರೋನಾ ಡೋಸ್ ಲಸಿಕೆ ಇನ್ನೂ ಬಳಕೆಯಾಗಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಲಸಿಕೆಯ ಪೂರೈಕೆ ಮತ್ತು ಸರಬರಾಜು ಕೊರತೆ ಹೆಚ್ಚಾಗಿದೆ ಎನ್ನುವ ಆರೋಪದ ನಡುವೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸ್ಪಷ್ಟನೆ ನೀಡಿದೆ.
ಕೇಂದ್ರ ಸರ್ಕಾರದಿಂದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಆಗಿರುವ 3.29 ಕೋಟಿ ಡೋಸ್ ಲಸಿಕೆಯು ಇನ್ನೂ ಬಳಕೆಯಾಗದೇ ಉಳಿದಿದೆ. ದೇಶದಲ್ಲಿ ಈವರೆಗೂ 45.37 ಕೋಟಿ ಡೋಸ್ ಲಸಿಕೆಯನ್ನು ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.
ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 190 ದಿನಗಳಲ್ಲಿ 43 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ವೇಳೆಗೆ 45,74,298 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 43,31,50,864 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.
2021ರ ಜುಲೈ 23ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 45,37,70,580 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ – 45,37,70,580

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ – 11,79,010

* ಬಳಕೆ ಆಗಿರುವ ಲಸಿಕೆ ಪ್ರಮಾಣ – 42,08,32,021

* ಕೊವಿಡ್-19 ಲಸಿಕೆಯ ಲಭ್ಯತೆ – 3,29,38,559

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss