Sunday, December 3, 2023

Latest Posts

ಮಹಾರಾಷ್ಟ್ರದ ಸತಾರಾದಲ್ಲಿ ಭೂಕಂಪ: 3.3 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರದ ಸತಾರಾದಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 3.3 ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪನ ರಾಷ್ಟ್ರೀಯ ಕೇಂದ್ರವು, ಭಾರತೀಯ ಕಾಲಮಾನದ ಪ್ರಕಾರ ಸೋಮವಾರ ರಾತ್ರಿ 11:36ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಕಂಪನ ಬಿಂದುವನ್ನು 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!