ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಗುವಾಹಟಿಯಲ್ಲಿ ಭೂಮಿ ಕಂಪಿಸಿದ್ದು, ಕಂಪನ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.5 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು, ಇಂದು ಬೆಳಗ್ಗೆ 5:42ಕ್ಕೆ
ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಭೂಕಂಪದ ಕೇಂದ್ರ ಬಿಂದುವನ್ನು 5 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ. ಈ ಘಟನೆಯಲ್ಲಿ ಯಾವುದೇ ಸಾವು ನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ವರದಿಯಾಗಿದೆ.