ಚಿತ್ರದುರ್ಗದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ದಾಖಲೆ ಇಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಅಪಾರ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಹಿರಿಯೂರು ಪೊಲೀಸರು ಕಾರ್ಯಾಚರಣೆ ನಡೆಸಿ 5 ಕೆಜಿ 250 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ತಹಶೀಲ್ದಾರ್ ರಾಜೇಶ್, ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ದಾಖಲೆಗಳಿಲ್ಲದೆ ಚಿನ್ನಾಭರಣ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿ ಬಂಡ ಹಿನ್ನೆಲೆ ಶೋಧ ನಡೆಸಿ ದಾಖಲೆ ಇಲ್ಲದ ಚಿನ್ನವನ್ನು ವಶಪಡಿಸಿಕೊಂಡಿದ್ದು. ಈ ಚಿನ್ನ ದಾವಣಗೆರೆಯ ಪ್ರಸಿದ್ಧ ಆಭರಣ ಮಳಿಗೆಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಕುರಿತು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!