ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.6 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು, ಭಾರತೀಯ ಕಾಲಮಾನದ ಪ್ರಕಾರ ಗುರುವಾರ ಬೆಳಿಗ್ಗೆ 3:49ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಕಂಪನ ಬಿಂದುವನ್ನು 10 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.