ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಧ್ಯಪ್ರದೇಶದ ಪಚ್ಮರ್ಹಿಯಲ್ಲಿ ಭಾನುವಾರದಂದು ಭೂಮಿ ನಡುಗಿದ್ದು, 3.6 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಭೂಕಂಪನವು 23 ಕಿಮೀ ಆಳದಲ್ಲಿದೆ ಸಂಭವಿಸಿದೆ ಎಂದು ವರದಿಯಾಗಿದೆ. ಈವರೆಗೆ ಯಾವುದೇ ಸಾವು ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ.