ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಭೂಮಿ ಕಂಪಿಸಿದ್ದು, 3.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.
ಭೂಕಂಪವು ನಿನ್ನೆ ರಾತ್ರಿ 10:07ರ ಸುಮಾರಿಗೆ 5 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ.
ಈವರೆಗೆ ಯಾವುದೇ ಸಾವುನೋವುಗಳು ಅಥವಾ ಹಾನಿಯ ಬಗ್ಗೆ ವರದಿಯಾಗಿಲ್ಲ.