ಬಂಗಾಳ ಕೊಲ್ಲಿಯಲ್ಲಿ ಭೂಕಂಪ: 3.9 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಂಗಾಳ ಕೊಲ್ಲಿಯಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಹೇಳಿದೆ.

ಇಂದು ಬೆಳಗ್ಗೆ 7:40 ಕ್ಕೆ ಬಂಗಾಳ ಕೊಲ್ಲಿಯಲ್ಲಿ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ.

ಭೂಕಂಪದಿಂದಾದ ಹಾನಿಯ ಬಗ್ಗೆ ಇಲ್ಲಿಯವರೆಗೆ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!