ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.9 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು, ಗುರುವಾರ ಬೆಳಗ್ಗೆ 9.34ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಕಂಪನ ಬಿಂದುವನ್ನು ಭೂಮಿಯ ಮೇಲ್ಮೈಯಿಂದ 76.18 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.