ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಮೂರು ರಾಷ್ಟ್ರಗಳ ಭೇಟಿಯ ಮೊದಲ ಹಂತದಲ್ಲಿ ನೈಜೀರಿಯಾದ ಅಬುಜಾ ನಗರಕ್ಕೆ ಆಗಮಿಸಿದ್ದಾರೆ. ಉತ್ಸಾಹಿ ಜನಸಮೂಹವು ಭವ್ಯ ಸ್ವಾಗತದೊಂದಿಗೆ ಪ್ರಧಾನಿ ಅವರನ್ನು ಬರಮಾಡಿಕೊಂಡರು.
ಫೆಡರಲ್ ರಿಪಬ್ಲಿಕ್ ಆಫ್ ನೈಜೀರಿಯಾದ ರಾಜಧಾನಿ ಅಬುಜಾಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಫೆಡರಲ್ ಕ್ಯಾಪಿಟಲ್ ಟೆರಿಟರಿ ಸಚಿವ ನೈಸೋಮ್ ಎಜೆನ್ವೋ ವೈಕ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ವೈಕ್ ಅವರು ಪ್ರಧಾನಿ ಮೋದಿಗೆ ಅಬುಜಾದ ನಗರದ ಕೀಯನ್ನು ನೀಡಿದರು. ಈ ಕೀಲಿಯು ನೈಜೀರಿಯಾದ ಜನರು ಪ್ರಧಾನಿಯ ಮೇಲೆ ಇಟ್ಟಿರುವ ನಂಬಿಕೆ ಮತ್ತು ಗೌರವವನ್ನು ಸಂಕೇತಿಸುತ್ತದೆ.