3 ದಿನ, 11 ಗಂಟೆ, 100 ಪ್ರಶ್ನೆ: ಸೋನಿಯಾ ಗಾಂಧಿ ವಿಚಾರಣೆ ಅಂತ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನ್ಯಾಷನಲ್​ ಹೆರಾಲ್ಡ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಒಟ್ಟು 11 ಗಂಟೆಗಳ ಕಾಲ ವಿಚಾರಣೆಗೊಳಪಟ್ಟಿದ್ದು, 100ಕ್ಕೂ ಅಧಿಕ ಪ್ರಶ್ನೆ ಕೇಳಲಾಗಿದೆ ಎಂದು ವರದಿಯಾಗಿದೆ.

ಮೂರನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದ ಸೋನಿಯಾ ಗಾಂಧಿ ಇಂದೂ ಸಹ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.

ಜುಲೈ 21ರಂದು ಮೊದಲ ಸುತ್ತಿನ ವಿಚಾರಣೆ ಎದುರಿಸಿರುವ ಸೋನಿಯಾ ಗಾಂಧಿ ನಿನ್ನೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ, ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಅಧಿಕಾರಿಗಳು ಸುಮಾರು 55ಕ್ಕೂ ಹೆಚ್ಚಿನ ಪ್ರಶ್ನೆ ಅವರಿಗೆ ಕೇಳಲಾಗಿದೆ ಎಂದು ತಿಳಿದು ಬಂದಿತ್ತು. ಇದರ ಬೆನ್ನಲ್ಲೇ ಇಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು.

ಇಂದು ಬೆಳಗ್ಗೆ 11 ಗಂಟೆಗೆ ಕಚೇರಿಗೆ ಆಗಮಿಸಿದ್ದ ಸೋನಿಯಾ ಗಾಂಧಿ ಮೂರು ಗಂಟೆಗಳ ಕಾಲ ಅಧಿಕಾರಿಗಳು ಕೇಳಿರುವ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
ಇಂದಿನ ವಿಚಾರಣೆ ಮುಕ್ತಾಯುದ ಬಳಿಕ ಯಾವುದೇ ರೀತಿಯ ನೋಟಿಸ್​ ನೀಡಿಲ್ಲ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!